Friday, July 25, 2008

ಢಮಾರ್......



ಬೆಂಗಳೂರಿನ ಜನರಿಗೆ ಬಾಂಬ್ ಬ್ಲಾಸ್ಟ್ ಹೊಸತು. ಆದರೂ ಥಿಯರೊಟಿಕಲ್ ನಾಲೆಡ್ಜ್ ಪ್ರತಿಯೊಬ್ಬ ಭಾರತೀಯನಿಗೂ ಬಹಳವಾಗಿಯೇ ಆಗಿಬಿಟ್ಟಿದೆ. ಸ್ವಲ್ಪ ಜನ ಹೆದರಿದರೆ ಇದನ್ನು ಎಂಜಾಯ್ ಮಾಡಿದವರೇ ಬಹಳಷ್ಟು ಜನ ಎನಿಸುತ್ತದೆ. ಮೂರು ಘಂಟೆಯ ಸುಮಾರಿಗೆ ಒಬ್ಬನಿಂದ ಸುದ್ದಿ ಬಂತು. ಬೆಂಗಳೂರಿನಲ್ಲಿ ಬಾಂಬ್ ಸ್ಪೋಟ ಎಂದು. ಹೋದಸಲವೂ ಹೀಗೇ ಆಗಿತ್ತು. ಕೆಂಪೇಗೌಡ ಬಸ್ ನಿಲ್ದಾಣದಲ್ಲೇ ಬಾಂಬ್ ಸ್ಪೋಟ ಎಂದು ಸುದ್ದಿ ಹಬ್ಬಿತ್ತು. ಮಾರನೇ ದಿನವೇ ಗೊತ್ತಾಗಿದ್ದು. ಅದು ಅಗ್ನಿಶಾಮಕ ದಳದ ಅಣಕು ಪ್ರದರ್ಶನ ಎಂದು. ಇದೂ ಹೀಗೇ ಏನೊ ಇರಬೇಕು ಎಂದು ಸುಮ್ಮನಾಗಿಬಿಟ್ಟೆ. ಅವನು ಅಷ್ಟಕ್ಕೇ ಸುಮ್ಮನಾಗದೆ NDTV ಸೈಟಿನ ಲಿಂಕನ್ನೂ ಕಳಿಸಿದ. ಅದರಲ್ಲಿ ಬಾಂಬ್ ಸ್ಪೋಟದ ಬಗ್ಗೆ ಬರೆದಿದ್ದ ಒಂದೇ ಒಂದು ವಾಕ್ಯ ಓದಿದಾಗ ನನಗೆ ನಿಜಕ್ಕೂ ಆಶ್ಚರ್ಯ ದುಃಖ ಭಯ ಎಲ್ಲಾ ಒಟ್ಟಿಗೇ ಆಗಿಬಿಟ್ಟಿತು. ಈ ಟೆರರಿಸ್ಟ್‌ಗಳಿಗೆ ಬೇರೆ ಕೆಲ್ಸಾ ಇಲ್ವೇನಪ್ಪಾ... ಥತ್.. ರಾಕ್ಷಸ ಜಾತಿಯವ್ರು ಎಂದುಕೊಳ್ಳುವಷ್ಟರಲ್ಲೆ ಶಾಂತವಾಗಿದ್ದ ಆಫೀಸ್ ತುಂಬೆಲ್ಲ ಗದ್ದಲ. ಬಾಂಬು... ಬ್ಲಾಸ್ಟು... ಮೂರು... ಐದು... ಏಳು... ಒಟ್ನಲ್ಲಿ ಬಾಂಬ್ ಹಾರಿಸಿದವನ ಧ್ಯೇಯ ಈಡೇರಿತು ಅನಿಸುತ್ತದೆ.



ಢಮಾರ್ ಢಮಾರ್ ಢಂ ಢಂ ಢಮಾರ್ ಢಮಾರ್
ಮಾಮಾ ಮಾಮಾ ಬಾಂಬ್ ಬ್ಲಾಸ್ಟ್
ಮಾಮಾ ಮಾಮಾ ಬಾಂಬ್ ಬ್ಲಾಸ್ಟ್
ಢಮಾರ್ ಢಮಾರ್ ಢಂ ಢಂ ಢಮಾರ್ ಢಮಾರ್

ಎಂಥಾ ಜನ ನೋಡಿ ಅವರೆಂಥಾ ಜನ ನೋಡಿ
ಢಂ ಢಂ ಢಮಾರ್ ಢಮಾರ್

ಇಪ್ಪತ್ತೊಂದನೆ ಶತಮಾನ ಟೆರರಿಸಮ್ಮಿನ ಜಮಾನ
ಸ್ನೇಹಕೆ ಬಾಂಬೆ ಬಹುಮಾನ ಕ್ರೌರ್ಯವೆ ಎಲ್ಲಕೆ ಯಜಮಾನ
ಯಾಕೆ ಇವರು ಹೀಗೆ ಆದರೋ
ಜನರ ಸಾವಲಿ ಸುಖವ ಕಾಣ್ವರೋ
ಹಾಕ್ಬೇಕು ಇವ್ರ ಜೈಲಿಗೆ ತಳ್ಬೇಕು ಇವ್ರ ನೇಣಿಗೆ

ಢಮಾರ್ ಢಮಾರ್ ಢಂ ಢಂ ಢಮಾರ್ ಢಮಾರ್

ಬಿಕನಾಸಿ ಓ ದರ್ಬೇಸಿ ಅಡಕಾಸಿ ಓ ಪರದೇಸಿ
ತಲೆಕೆಟ್ಟಿರುವ ಜಿಹಾದಿ ಬೈದರು ಇಲ್ಲ ಮರ್ಯಾದಿ
ಮಾನಗೆಟ್ಟ ಮಂದಿ ಅವರೆಲ್ಲ
ಮಾನವೀಯತೆ ಎಂಬುದೆ ಗೊತ್ತಿಲ್ಲ
ಹಿಡಿದ್‌ಹಾಕಿ ಅವ್ರ ಬಡಿದ್‌ಹಾಕಿ ಕರುಣೆ ಇಲ್ದೆ ಕೊಂದ್‌ಹಾಕಿ

ಢಮಾರ್ ಢಮಾರ್ ಢಂ ಢಂ ಢಮಾರ್ ಢಮಾರ್

ಎಂಥಾ ಜನ ನೋಡಿ ಅವರೆಂಥಾ ಜನ ನೋಡಿ
ಢಂ ಢಂ ಢಮಾರ್ ಢಮಾರ್
ಢಂ ಢಂ ಢಮಾರ್ ಢಮಾರ್

2 comments:

ದೀಪಕ said...

ನಮಸ್ಕಾರ/\:)

ಡಗಾರ್ ಡಗಾರ್ ಡಮಾರ್ ಡಮಾರಾಗಿ ಪಸಾ೦ದಾಗಿ ಮೂಡಿಬ೦ದಿದೆ :)

ಇ೦ತಿ,

ದೀಪಕ

ಸಿದ್ಧಾರ್ಥ said...

@ದೀಪಕ
ಧನ್ಯವಾದಗಳು... ಇದು ಕೇವಲ ಬೆಂಗಳೂರಿನಲ್ಲಿ.. ಅದೂ ಸಣ್ಣಪ್ರಮಾಣದಲ್ಲಿ ಆಯ್ತು ಅಂತ ಮಾಡಿದ್ದೆ. ನೋಡಿದ್ರೆ ಅಹ್ಮದಾಬಾದ್‌ನಲ್ಲಿ ಸಿಕ್ಕಾಪಟ್ಟೆ ಮಾಡ್ಬಿಟ್ಟಿದಾರಲ್ಲಾ... ಎಂಥಾ ಹಲ್ಕಾ ಜನ. ಛೆ...